ಸುದ್ದಿಬಿಂದು ಬ್ಯೂರೋ
ಕಾರವಾರ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲಾಡಳಿತ ಬುಧವಾರ (ಜುಲೈ 5) ರಂದು ಕರಾವಳಿ ಭಾಗದಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಜುಲೈ 05 ರಂದುಬೆಳಿಗ್ಗೆ 8..30 ರ ವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರು ಮಾಹಿತಿ ನೀಡಿದ್ದು ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ್ ಈ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ. ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.