ಸುದ್ದಿಬಿಂದು ಬ್ಯೂರೋ
ಕಾರವಾರ
: ಉತ್ತರಕನ್ನಡ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಥವ್ತಸ್ಥಗೊಂಡಿದ್ದು, ಕಾರವಾರ ಮಂಗಳೂರು ಹೆದ್ದಾರಿಯಲ್ಲಿ ಜಲಾವೃತವಾಗಿದ್ದು, ವಾಹನ‌ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಕಾರವಾರ ನಗರದಲ್ಲಿ ಮಳೆ ಆರ್ಭಟ ಜೋರಾಗಿದ್ದು, ನಗರದ ಪ್ರಮುಖ ರಸ್ತೆಗಲ್ಲಿ ನೀರು ತುಂಬಿದ್ದು, ವಾಹನ ಸವಾರರು ಸಂಚಾರ ಮಾಡ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಭಟ್ಕಳ, ಅಂಕೋಲಾ, ಕುಮಟಾ ಹೊನ್ನಾವರದಲ್ಲೂ ಧಾರಾಕಾರ ಮಳೆ ಸರಿಯುತ್ತಿದ್ದು, ಅನೇಕ ಕಡೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಭಟ್ಕಳ ಪಟ್ಟಣದ ಸಂಶುದ್ದೀನ್ ವೃತ್ತ ಜಲಾವೃತವಾಗಿದ್ದು, ಭಟ್ಕಳ‌‌ ಸೇರಿ ದಕ್ಷಿಣಕನ್ನಡ ಜಿಲ್ಲೆಗಳಿಗೆ ಸಂಚರಿಸುವ ವಾಹನ ಸವಾರರು ಪರದಾಡುತ್ತಿದ್ದಾರೆ. ಭಟ್ಕಳ ತಾಲೂಕು ಒಂದರಲ್ಲೆ 112.1ಮಿಮೀ ಮಳೆ ಸುರಿದಿದ್ದು, ಅಲ್ಲಿನ ಜನರು ಆತಂಕದಲ್ಲಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ ಮೂರನಾಲ್ಕು ದಿನಗಳ ಕಾಲ‌‌ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಆರೆಂಜ್ ‌ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ‌ ಮುಂದುವರೆಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಅಧಿಕಾರಿಗಳು ಸಹ ಸಮಸ್ಯೆ ಎದುರಿಸಲು ಸನ್ನದ್ಧರಾಗಿದ್ದಾರೆ.