ಸುದ್ದಿಬಿಂದು ಬ್ಯೂರೋ
ಕುಮಟ : ಭಾರೀ ಮಳೆಯಿಂದಾಗಿ ಚಲಿಸುತ್ತಿದ್ದ ಕಾರ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿ ಕಾರನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಬರ್ಗಿಯಲ್ಲಿ ನಡೆದಿದೆ.

ಕುಮಟ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ವೇಳೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ.ಇನ್ನೂ ಕಾರನಲ್ಲಿ ಇದ್ದವರು ಇನ್ನೊಂದು ಕಾರನಲ್ಲಿ ಪ್ರಯಾಣಿಸಿದ್ದು,ಇವರಿಗೆ ಸಣ್ಣಪುಟ್ಟ ಗಾಯವಾಗಿದೆ..
ಇನ್ನೂ ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.