ಸುದ್ದಿಬಿಂದು ಬ್ಯೂರೋ
ಕಾರವಾರ
: ಉತ್ತರಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ವ್ಯಾಪಕವಾಗಿ ಮಳೆ ಸುರಿದಿದ್ದು, ಇಂದು ಸಂಜೆ ಬಳಿಕ ಮಳೆ‌ ಪ್ರಮಾಣ ಇಳಿಮುಖವಾಗಿದೆ. ಹೀಗಾಗಿ ನಾಳೆ ಎಂದಿನಂತೆ ಶಾಲಾ- ಕಾಲೇಜು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ಮಾಹಿತಿ‌ ನೀಡಿದೆ.

ಜಿಲ್ಲೆಯ ಕರಾವಳಿಯ ಐದು ತಾಲೂಕಿನಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಇರುವ ಕಾರಣಕ್ಕ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ,ಅಂಕೋಲಾ,ಕುಮಟ,ಹೊನ್ನಾವರ ಹಾಗೂ ಭಟ್ಕಳ‌ ತಾಲೂಕಿನ ಎಲ್ಲಾ ಶಾಲಾ‌- ಕಾಲೇಜಿಗೆ ರಜೆ ನೀಡಲಾಗಿತ್ತು.

ಆದರೆ ನಾಳೆ ಬೆಳಿಗ್ಗೆಯಿಂದ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಲಿದೆ ಎನ್ನುವ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಉಡುಪಿಯಲ್ಲಿ ಮಳೆ‌ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಅಲ್ಲಿನ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.