ಸುದ್ದಿಬಿಂದು ಬ್ಯೂರೋ
ಭಟ್ಕಳ
: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇಂದು ಸಹ ವರುಣನ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಭಟ್ಕಳದ‌ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಬೆಳಿಗ್ಗೆಯಿಂದಲ್ಲೆ ಭಟ್ಕಳದಲ್ಲಿ‌‌ ಮಳೆ‌ ನಿರಂತರವಾಗಿ ಸುರಿಯುತ್ತಿದ್ದು,‌‌ ಭಟ್ಕಳ‌ದಿಂದ ಮಂಗಳೂರು ಸಂಚಾರ ಮಾಡುವ ವಾಹನ ಸವಾರರು ಪರದಾಡುವಂತಾಗಿದೆ. ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ಹೆದ್ದಾರಿ ಎನ್ನುವದು ನದಿಯಂತಾಗಿದೆ.

ಹೆದ್ದಾರಿಯಲ್ಲಿ ನೀರು ನಿಂತಿರುವುದರಿಂದಾಗಿ ಹೆದ್ದಾರಿಯ ಎರಡು ಬದಿಯಲ್ಲಿರುವ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದ್ದು, ಸ್ಥಳೀಯ‌ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಭಾರೀ ಪ್ರಮಾಣದಲ್ಲಿ ಮಳೆ‌ ಸುರಿಯುತ್ತಿದ್ದು ಹೆದ್ದಾರಿಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ‌ ನೀರು ನಿಂತುಕೊಂಡಿದ್ದು, ಇನ್ನೂ ಉತ್ತರಕನ್ನಡ ಜಿಲ್ಲೆಯಿಂದ ಮಂಗಳೂರು ಆಸ್ಪತ್ರೆಗಳಿಗೆ ರೋಗಿಗಳನ್ನ ಕರೆದುಕೊಂಡು ಹೋಗುವ ವಾಹನ ಸವಾರರು ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.