ಸುದ್ದಿಬಿಂದು ಬ್ಯೂರೋ
ಹುಬ್ಬಳ್ಳಿ
:ಮಹಿಳೆಯರಿಗೆ ಉಚಿತ (Free Ticket) ಬಸ್ ಪ್ರಯಾಣ ಬೆನ್ನಲ್ಲೇ ಪುರುಷರು ಬಸ್ ಪ್ರಯಾಣಕ್ಕೆ ಏನೆಲ್ಲ ಸಾಹಸಗಳನ್ನು ಮಾಡುತ್ತಿದ್ದಾರೆ ನೋಡಿ. ಇಲ್ಲೋರ್ವ ವ್ಯಕ್ತಿ ಮಹಿಳೆಯರ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ (Bus Ticket) ಈ ಘಟನೆ ನಡೆದಿದ್ದು, ವೀರಭದ್ರಯ್ಯ ನಿಂಗಯ್ಯ ಮಠಪತಿ ಎಂಬ ವ್ಯಕ್ತಿ ಬುರ್ಖಾ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾನೆ.

ಅನುಮಾನಗೊಂಡ ಸಾರ್ವಜನಿಕರು ಆತನನ್ನು ಹಿಡಿದು ವಿಚಾರಿಸಿದಾಗ ವಿಷಯ ಬಾಯ್ಬಿಟ್ಟಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿಯ ಘೋಡಗೋರಿ ನಿವಾಸಿಯಾದ ವೀರಭದ್ರಯ್ಯ ನಿಂಗಯ್ಯ ಮಠಪತಿ, ತಾನು ಭಿಕ್ಷಾಟನೆಗಾಗಿ ಈ ರೀತಿ ವೇಷ ತೊಟ್ಟಿರುವುದಾಗಿ ಹೇಳಿದ್ದಾನೆ.

ಆದರೆ ಹಲವರು ಉಚಿತ ಬಸ್ ಪ್ರಯಾಣಕ್ಕಾಗಿ ಆತ ಮಹಿಳೆಯರಂತೆ ವೇಷ ಧರಿಸಿದ್ದಾನೆ ಎಂದು ಭಾವಿಸಿದ್ದರು. ವೀರಭದ್ರಯ್ಯ ಬಳಿ ಮಹಿಳೆಯ ಆಧಾರ್ ಕಾರ್ಡ್ ಝೆರಾಕ್ಸ್ ಕೂಡ ಸಿಕ್ಕಿದ್ದು, ಅನುಮಾನಕ್ಕೆ ಕಾರಣವಾಗಿದೆ.