ಸುದ್ದಿಬಿಂದು ಬ್ಯೂರೋ
ಬಂಟ್ವಾಳ: ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಓರ್ವ ಮಹಿಳ ಸಾವನ್ನಪ್ಪಿದ್ದು,ಇನ್ನೋರ್ವಳನ್ನ ರಕ್ಷಣೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ನಡೆದಿದೆ.
ಘಟನೆಯಲ್ಲಿ ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.
ಒಮಣ್ಣಿನೊಳೆ ಸಿಲುಕಿದ್ದ ಝರೀನಾ ಎಂಬ ಮಹಿಳೆಯನ್ನು ರಕ್ಷಣೆ ಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು ಆಕೆಯನ್ನ ಜೀವಂತವಾಗಿ ರಕ್ಷಣೆ ಮಾಡಲು ಸಾಧ್ಯವಾಗದೆ ಆಕೆ ಮೃತಪಟ್ಟಿದ್ದಾಳೆ. ಇನ್ನೂ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದ ಶಫಾ ಎಂಬಾಕೆಯನ್ನ ರಕ್ಷಣೆ ಮಾಡಲಾಗಿದೆ.