ಸುದ್ದಿಬಿಂದು ಬ್ಯೂರೋ
ಹುಬ್ಬಳ್ಳಿ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ (Police Constable Suicide)ಒಬ್ಬರು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರೇ ದೊಡ್ಡಮನಿ ಕಾಲೊನಿಯಲ್ಲಿದ್ದ ತಾವು ಬಾಡಿಗೆ ಇದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು (Belagavi, Kittur) ತಾಲ್ಲೂಕಿನ ಸಂಗೊಳ್ಳಿ ಗ್ರಾಮದವರಾಗಿದ್ದ ಮಲ್ಲಿಕಾರ್ಜುನ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಲ್ಲಿಕಾರ್ಜುನ ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ,ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ