ಸುದ್ದಿಬಿಂದು ಬ್ಯೂರೋ
ಕಾರವಾರ
: ರಾಜ್ಯದ ಕರಾವಳಿಯಲ್ಲಿ ಕಳೆದ ಒಂದುವಾರದ ಹಿಂದಷ್ಟೆ ಸಾಕಷ್ಟು ಅವಾಂತರ ಸೃಷ್ಟಿಸಿ ತಣ್ಣಗಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ (64.5 ಮಿ.ಮೀ ನಿಂದ 115.5 ಮಿ.ಮೀ) ಬೀಳುವ ಮುನ್ಸೂಚನೆಯನ್ನು ಹವಾಮಾನ ಸಂಸ್ಥೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚಿಸಿದೆ. ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿಯ ವೇಗವು ಸಂಭವಿಸುವ ಸಾಧ್ಯತೆಯಿದೆ. ಕರ್ನಾಟಕ ಕರಾವಳಿಯಲ್ಲಿ 40-45 ಕಿಲೋಮೀಟರ್ ವೇಗದಲ್ಲಿ 55 ಕಿಮೀ ವೇಗದಲ್ಲಿ ಗಾಳಿಯ ವೇಗವುಳ್ಳ ಹವಾಮಾನವು ಚಾಲ್ತಿಯಲ್ಲಿರಲಿದೆ.