ಸುದ್ದಿಬಿಂದು ಬ್ಯೂರೋ
ಕಾರವಾರ
:ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನ ಯಲ್ಲೋ ಅಲರ್ಟ್
ಜುಲೈ 22, 23 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಘಟ್ಟದ ಮೇಲ್ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಜಿಲ್ಲೆಯ ಎಲ್ಲಾ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವವರಿಗೆ ಸಹ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮುಂದುವರೆಯಲಿದೆ. 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಿಗೂ ಕೂಡ ಸಮದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಜಿಲ್ಲೆಯ ಕರಾವಳಿ ತಾಲೂಕು ಸೇರಿದಂತೆ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ.ಗಾಳಿ ಸಹಿತ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಜೊತೆಗೆ 40-50 ಕಿಮೀ ವೇಗದಲ್ಲಿ ಗಾಳಿ‌ ಸಹಿತ ಮಳೆಯಾಗಲಿದೆ.