ಸುದ್ದಿಬಿಂದು ಬ್ಯೂರೋ
ಯಲ್ಲಾಪುರ
: ಬೆಂಗಳೂರಿನಿಂದ ಗೋವಾ ಕ್ಕೆ ಹೊರಟಿದ್ದ ಖಾಸಗಿ ಬಸ್ ನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆ ಕೇ ಮಿಲನ್ ಹೋಟೆಲ್ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನುಹೆಚ್ಚಿನ ಚಿಕಿತ್ಸೆ ಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ ಚಿಕ್ಕ ಪುಟ್ಟ ಗಾಯಗೊಂಡವರನ್ನು ಯಲ್ಲಾಪುರದ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಆಪಘಾತಗೊಂಡ ಸ್ಥಳಕ್ಕೆ ಪೊಲೀಸ್ ನಿರೀಕ್ಷಕರಾದ ರಂಗನಾಥ್, ನೀಲಮ್ಮನವರ್ ಹಾಗೂ ಪಿಎಸ್‌ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.