ಸುದ್ದಿಬಿಂದು ಬ್ಯೂರೋ
ಕಾರವಾರ
: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನಾಳೆ ಜುಲೈ 23ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರತಿ ಗಂಟೆಗೆ 50 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರ ಪ್ರಕ್ಷುಬ್ದಗೊಳ್ಳುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಭಾರಿ ಅಲೆಗಳು ತೀರಕ್ಕೆ ಅಪ್ಪಳಿಸುವ ಕಾರಣ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಕೂಡ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಕದ್ರಾ ಜಲಾಶಯದಲ್ಲಿ ನೀರಿ ಒಳ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 30 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಒಳಬರುತ್ತಿದ್ದು, ಜಲಾಶಯದ 6 ಗೇಟ್ ಮೂಲಕ 30ಸಾವಿರ ಕ್ಯೂಸೆಕ್ ನೀರನ್ನು ಕಾಳಿ ನದಿಗೆ ಹರಿಬಿಡಲಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಕಾರಣ ಕಾಳಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.