ಸುದ್ದಿಬಿಂದು ಬ್ಯೂರೋ
ಕಾರವಾರ :ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಎಲ್ಲಾ ತಾಲೂಕಿನಲ್ಲಿ ನಾಳೆ ಜುಲೈ 25ರಂದು (ಮಂಗಳವಾರ) ಶಾಲಾ ಕಾಲೇಜುಗಳಿಗೆ ರಜೆ (
School-College Holiday) ಘೋಷಿಸಲಾಗಿದೆ.

ಹವಾಮಾನ ಇಲಾಖೆಯ(Meteorological Department,) ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉತ್ತರಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ‌.

ಉತ್ತರಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು,(Tourists)ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.