ಸುದ್ದಿಬಿಂದು ಬ್ಯೂರೋ
ಕಾರವಾರ: ರಾಜ್ಯದ ಅನೇಕ ಜಿಲ್ಲೆಯಲ್ಲಿ ಕಳೆದ ಮೂರನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕರಾವಳಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 3-4 ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಗಾಳಿ ಜೊತೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿ ಜಿಲ್ಲೆಗಳಾದ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಲಿದೆ.. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಪ್ರವಾಸಿಗರು ಸಹ ಸಮುದ್ರ ತೀರ ಹಾಗೂ ಜಲಪಾತಗಳಿಗೆ ಭೇಟಿ ನೀಡದಂತೆ ಎಚ್ಚರಿಕೆ ನೀಡಲಾಗಿದೆ.