ಕಾರವಾರ : ಉತ್ತರಕನ್ನಡ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ನಾಳೆ ಜುಲೈ 26ರಂದು ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಕಾರವಾರ, ಹೊನ್ನಾವರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ಐದು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಸೀಲ್ದಾರ ರವರಿಗೆ ಶಾಲೆ ಕಾಲೇಜ್ ರಜೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲು ಅಧಿಕಾರ ನೀಡಲಾಗಿದೆ.
ಕಳೆದ ಎರಡುದಿನಗಳ ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಈಗಾಗಲೆ ಜಿಲ್ಲೆಯ ಬಹುತೇಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅನೇಕ ಕಡೆಯಲ್ಲಿ ಸಂಚಾರಕ್ಕೂ ಅಡ್ಡಿ ಆಗಿದೆ. ಇನ್ನೂ ಮುಂದಿನ ಮೂರು ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಈ ಐದು ತಾಲೂಕಿನ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.