ಸುದ್ದಿಬಿಂದು ಬ್ಯೂರೋ
ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಗೆ ಅಂಟಿಕೊಂಡಿರುವ ಯರಗುಪ್ಪಿ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಘಟನೆಯಲ್ಲಿ ಮಂಜುನಾಥ ಸೋಮಪ್ಪ ಬೆಂತೂರು ಎಂಬಾತನೆ ಮೃತಪಟ್ಟಿರುವ ಯುವಕನಾಗಿದ್ದಾನೆ,ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ಸಮಯದಲ್ಲಿ ಆತ ನಡೆದುಕೊಂಡು ಎಲ್ಲಿಗೆ ಹೋಗುತ್ತಿದ್ದ ಎಂಬುದರ ಬಗ್ಗೆಯೂ ಪೊಲೀಸರು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.
.