ಸುದ್ದಿಬಿಂದು ಬ್ಯೂರೋ
ಕಾರವಾರ
: ಕಾರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 1ವರ್ಷಗಳ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು (Para Legal Volunteers) ನೇಮಕ ಮಾಡಿಕೊಳ್ಳುಲು ಅರ್ಜಿ ಆಹ್ವಾನಿಸಲಾಗಿದೆ.

ಕಾರವಾರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಿಕ್ಷಕರು, ನಿವೃತ್ತ ಸರಕಾರಿ ನೌಕರರು,ಹಿರಿಯ ನಾಗರಿಕರು, MSW ವಿದ್ಯಾರ್ಥಿಗಳು,ಕಾನೂನು ವಿದ್ಯಾರ್ಥಿಗಳು, ಅಂಗನವಾಡಿ ಶಿಕ್ಷಕಿಯರು ,ಆಶಾ ಕಾರ್ಯಕರ್ತೆಯರು, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು, ವೈದ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಕನಿಷ್ಟ 10 ನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದ ಸಮಾಜ ಸೇವೆಯಲ್ಲಿ ಆಸಕ್ತಿವುಳ್ಳ ಇತರರು ಕಚೇರಿಯಿಂದ ಪಡೆದು ನಮೂನೆಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ, ಕಾರವಾರ ಇವರಿಗೆ ಸೆ.04 ರ ಸಂಜೆ 5.ಗಂಟೆಯ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-222990 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ದೇವಿದಾಸ ರಾಯ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.