ಸುದ್ದಿಬಿಂದು ಬ್ಯೂರೋ
ಮಂಗಳೂರು : ಉಡುಪಿ ಕಾಲೇಜೊಂದರ ಟಾಯ್ಲೆಟ್ ನಲ್ಲಿ ವಿದ್ಯಾರ್ಥಿನಿ ಓರ್ವಳ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೊಟೊ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ಇದನ್ನ ಎಸ್ ಐಟಿಗೆ ವಹಿಸುವ ಪ್ರಶ್ನೆ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ಓರ್ವಳು ಟಾಯ್ಲೆಟ್ ಗೆ ಹೋಗಿದ್ದ ವೇಳೆಯಲ್ಲಿ ಆಕೆಯ ಗೆಳತಿಯರೆ ಪೋಟೋ ತೆಗೆದಿರುವ ಪ್ರಕರಣಕ್ಕೆ ಸಂಬಂಧಿಸಿ. ಸಿ ಎಂ ಅವರು ಮಂಗಳೂರಿಗೆ ಆಗಮಿಸಿದ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಸಿ ಎಂ ಅವರು ಪ್ರರಕರಣದ ಕುರಿತಾಗಿ ಡಿವೈಸ್ ಎಸ್ಪಿ ಮಟ್ಟದ ಅಧಿಕಾರಿಗಳು ಇದರ ತನಿಖೆಯನ್ನ ನಡೆಸುತ್ತಿದ್ದಾರೆ.ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು. ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೇಳಿದಕ್ಕೆ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದು ಮಾಧ್ಯಮದವರನ್ನೆ ಸಿ ಎಂ ಪ್ರಶ್ನಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು,ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದಿದ್ದಾರೆ.