ಸುದ್ದಿಬಿಂದು ಬ್ಯೂರೋ
ಶಿರಸಿ: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗದ್ದೆಗೆ ಬಸ್ ಉರುಳಿ ಬಿದ್ದು ಬಸ್‌ನಲ್ಲಿದ್ದ11ಮಂದಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ (uttara Kannada) ಶಿರಸಿ ತಾಲೂಕಿನ ಹನುಮಂತಿ ಪಲ್ಟಿಯಾಗಿರುವ ಘಟನೆ ಶನಿವಾರ ಬೆಳಿಗ್ಗಿನ ಜಾವ 3ಗಂಟೆಗೆ ನಡೆದಿದೆ.
ಈ ಬಸ್ ಮಂಗಳೂರಿನಿಂದ ಕುಷ್ಟಗಿಗೆ (Mangalore, Kushtagi)ಚಲಿಸುತ್ತಿತ್ತು ಎನ್ನಲಾಗಿದೆ. ಬಸ್ ಹನುಮಂತಿ ಸಮೀಪ ಹೋಗುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿದೆ. ಇದರಿಂದ 11ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಗೊಂಡವರನ್ನ ತಕ್ಷಣ ಶಿರಸಿ ನಗರದ ಪಂಡಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.