ಸುದ್ದಿಬಿಂದು ಬ್ಯೂರೋ
ಕುಮಟ
: ವಿದ್ಯುತ್ ದುರಸ್ತಿ ‌ಮಾಡಿಕೊಂಡು ಜೀವನ ನಡೆಸುತ್ತಿದ್ದ ನಾಗರಾಜ ಎಂಬಾತ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುವೇಳೆ ನೀರಿನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ‌ ಮೂರುರೂ ನಲ್ಲಿ ನಡೆದಿದೆ.

ನಾಗರಾಜ ಗಾವಡಿ (31),ಎಂಬಾತನೆ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.ಈತ ಕರೆಂಟ್ ರೀಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು, ಇಂದು ಸಹ ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಮೂರೂರಿನ ಗಣಪು ಗೌಡ ಅವರ ನೆಲಬಾವಿಯಲ್ಲಿ ಕಾಲು‌ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಕುಮಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಕುಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.