ಸುದ್ದಿಬಿಂದು ಬ್ಯೂರೋ
ಕುಮಟ : ರೆಸಾರ್ಟ್ (resort ) ಒಂದರಲ್ಲಿ ವಾಸ್ತವ್ಯ ಮಾಡಿದ್ದ ಬೆಂಗಳೂರು ( bangalore)ಮೂಲದ ವ್ಯಕ್ತಿ ಓರ್ವ ತಾನು ಉಳಿದುಕೊಂಡಿದ್ದ ರೂಂನಲ್ಲಿಯೇ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಸಾಪ್ಟ್‌ವೇರ್ ಎಂಜಿನಿಯರ್ ಆಗಿದ್ದ ರಿಷಿಕೇಶ ರೆಡ್ಡಿ (35) ವರ್ಷದ ವ್ಯಕ್ತಿ ಆತ್ಮಹತ್ಯೆ (suicide)ಮಾಡಿಕೊಂಡವನಾಗಿದ್ದಾನೆ.ಈತ ಗೋಕರ್ಣದ ಓಂ ಬೀಚ್ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ರೂ ಬಾಡಿಗೆಗೆ ಪಡೆದುಕೊಂಡಿದ್ದ ಎನ್ನಲಾಗಿದೆ. ಆತನ ಆತ್ಮಹತ್ಯೆಗೆ ನಿಖರವಾಗಿರುವ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೇಣಿಗೆ ಶರಣಾದ ವ್ಯಕ್ತಿಯ ಮೃತ ದೇಹವನ್ನ ಗೋಕರ್ಣದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತನ ಕುಟುಂಬಸ್ಥರು ಬಂದ ಬಳಿಕ ಶವ ಕುಟುಂಬದವರಿಗೆ ಒಪ್ಪಿಸಲಾಗುವುದು. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.