ಸುದ್ದಿಬಿಂದು ಬ್ಯೂರೋ
ವಿಜಯಪುರ
: ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿರುವ (Car Accident) ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ (District Hospital)ಎದುರು ನಡೆದಿದೆ.

ಅತೀ ವೇಗವಾಗಿ ಸಂಚರಿಸುತ್ತಿದ್ದ ಕಾರಿಗೆ ಅಡ್ಡ ಆಟೋ ಬಂದಿದೆ. ಅದಕ್ಕಾಗಿ ಅಪಘಾತ ತಪ್ಪಿಸಲು ಹೋಗಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಲ್ಲದೇ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಎಂಎಚ್ 10 ಎಜಿ 2022 ಕಾರು ಚಾಲಕನ ಅತೀ ವೇಗವೆ ಅಪಘಾತಕ್ಕೆ ಕಾರಣ ಆಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.