ಸುದ್ದಿಬಿಂದು ಬ್ಯೂರೋ

ಕಾರವಾರ : ಸ್ಕೂಟಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರನಾಗಿದ್ದ ಬ್ಯಾಂಕ್ ಮ್ಯಾನೇಜರ್ ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆ ಕಾರವಾರ ನಗರದ ಆರ್ ಟಿ ಓ ಕಚೇರಿ ಸಮೀಪದಲ್ಲಿ ನಡೆದಿದೆ.

ಸ್ಕೂಟರ್ ನಲ್ಲಿ ಹಾಫ್ ಹೆಲ್ಮೆಟ್ ಧರಿಸಿ ವೇಗವಾಗಿ ಬರುತ್ತಿದ್ದ ಕಾರವಾರ ಅರ್ಬನ್ ಬ್ಯಾಂಕ್ ಮ್ಯಾನೇಜರ್ ಗುರುದಾಸ್ ಬಾಂದೇಕರ್ (55), ಎದುರು ಗುರುತಿಸಲಾಗಿದೆ. ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಕಾರಣ ಗಂಭೀರವಾಗಿ ಗಾಯಗೊಂಡಿದ್ದ,‌‌ಇದರಿಂದಾಗಿ ಗುರುದಾಸ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು.

ತಕ್ಷಣ ಕಾರಿನ‌ ಚಾಲಕ ಗಾಯಗೊಂಡ ಗುರುದಾಸ್ ಅವರನ್ನು ತಮ್ಮದೇ ಕಾರಿನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.