ಸುದ್ದಿಬಿಂದು ಬ್ಯೂರೋ
ಸಿದ್ದಾಪುರ : ಬೈಕ್ ಹಾಗೂ ಲೈಲ್ಯಾಂಡ್ ಗೂಡ್ಸ್ ವಾಹನದ ನಡುವೆ ಅಪಘಾತವಾಗಿ ಬೈಕ್ ನಲ್ಲಿದ್ದ ಮೂವರ ಪೈಕಿ ಓರ್ವ ಗಂಭೀರವಾಗಿ ಇಬ್ಬರು ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾಗಲಿ ಸಮೀಪ ನಡೆದಿದೆ.

ಅಪಘಾತದಲ್ಲಿ ಸಲ್ಮಾನ್, ನಾಗರಾಜ್ ಮಾದರ,ಉಮೇಶ ಮಾದರ ಎಂಬುವವರು ಗಾಯಗೊಂಡಿದ್ದಾರೆ. ಇವರಲ್ಲಿ ಸಲ್ಮಾನ್ ಎಂಬುವವರಿಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೂ ಗಾಯಗೊಂಡಿದ್ದ ಉಮೇಶ ಹಾಗೂ ನಾಗರಾಜ್ ಅವರಿಗೆ ಸಿದ್ದಾಪುರದ ಶಿರಸಿ ಪಂಡಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸುದ್ದಿ ತಿಳಿದ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.