ಸುದ್ದಿಬಿಂದು ಬ್ಯೂರೋ
ಕುಮಟಾ : ಇದೇ ಶನಿವಾರ, ಆಗಸ್ಟ್ 26ರಂದು ಕುಮಟಾ ತಾಲೂಕಾ ವ್ಯಾಪ್ತಿಯಲ್ಲಿ ಶಿಕ್ಷಣ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಕುಮಟಾ ತಾಲೂಕಾ ಆರ್ಯ ಈಡಿಗ ನಾಮಧಾರಿ ಸಂಘದ ವತಿಯಿಂದ ಪುರಸ್ಕರಿಸಲಾಗುತ್ತಿದೆ.

ಇದೇ ಸಂದರ್ಭ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯರಿಗೆ ಹಾಗೂ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಕುಮಟಾ ತಾಲೂಕಾ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷರಾದ ಮಂಜುನಾಥ ನಾಯ್ಕ ಕೋರಿದ್ದಾರೆ.