ಸುದ್ದಿಬಿಂದು ಬ್ಯೂರೋ
ಕುಮಟಾ: ಹೆದ್ದಾರಿ ದಾಟುತ್ತಿದ್ದ ಮಹಿಳೆ ಓರ್ವಳಿಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಧಾರೇಶ್ವರ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಅಪಘಾತದಲ್ಲಿ ಧಾರೇಶ್ವರದ ನಿವಾಸಿ ಗೌರಿ ಶ್ರೀಧರ ನಾಯ್ಕ (48) ಮೃತಪಟ್ಟ ಮಹಿಳೆ ಆಗಿದ್ದಾಳೆ. ಮೃತಳು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು ಎನ್ನಲಾಗಿದೆ. ಗೌರಿ ಹೆದ್ದಾರಿ ದಾಟುವ ಸಂದರ್ಭದಲ್ಲಿ ಕುಮಟಾದಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಕಾರನ್ನು ಅಮೃತಾ ಎಂಬುವರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.