ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಉತ್ತರಕನ್ನಡ (Uttarkannada)ಜಿಲ್ಲೆಯ ಮಾಜಿ ಸಚಿವರು ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಅವರು ಸಿ ಎಂ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಸಿ ಎಂ ಬಳಿ ಮನವಿ ಸಲ್ಲಿಸಿದರು
.

ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದಲ್ಲಿ ವಾಡಿಕೆಗಿಂತ 70 % ಪ್ರತಿಶತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನವನ್ನು ಮಂಜೂರಿಸುವಂತೆ ಲಿಖಿತ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.