ಸುದ್ದಿಬಿಂದು ಬ್ಯೂರೋ
ಕಾರವಾರ : ಲಾರಿಯೊಂದರಲ್ಲಿ ಅಕ್ರಮವಾಗಿ ಜಾನುವಾರು ಮಾಡುತ್ತಿದ್ದ ವೇಳೆ ವಾಹನ ತಡೆದು ಜಾನುವಾರುಗಳನ್ನ ರಕ್ಷಣೆ ಮಾಡಿ. ಆರೋಪಿಗಳನ್ನ ಪೊಲೀಸರಿಗೆ ಒಪ್ಪಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾ ಗ್ರಾಮದಲ್ಲಿ ನಡೆದಿದೆ.
ನೌಕಾನೆಲೆ ಸೀಬರ್ಡ್ ಯೋಜನಾ ಪ್ರದೇಶದಿಂದ ನಕಲಿ ಅನುಮತಿ ಪತ್ರವನ್ನ ಪಡೆದು.ಅರಗಾದ ನೇವಲ್ ಬೇಸ್ ನಿಂದ 18 ಗೋವುಗಳನ್ನ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಇದನ್ನ ಗಮನಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು, ಚೆಂಡಿಯಾ ಗ್ರಾ.ಪಂ ಸದಸ್ಯರು ಹಾಗೂ ಅಂಕೋಲಾ ಭಾಗದ ಗೋಪ್ರೇಮಿ ಸಂಘದ ಸದಸ್ಯರು ಲಾರಿಯನ್ನ ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಜಾನುವಾರುಗಳನ್ನ ಕಾರವಾರದ ಅರಗಾರದಿಂದ ಗುಲ್ಬರ್ಗಾ ಜಿಲ್ಲೆಗೆ ಸಾಗಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಕಾರವಾರ ಪೊಲೀಸರು ಲಾರಿಯನ್ನ ವಶಕ್ಕೆ ಪಡೆದು, 18 ಜಾನುವಾರುಗಳನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಈ ಅಕ್ರಮ ಜಾನುವಾರು ಸಾಗಾಟದಲ್ಲಿ ಬಾಗಿಯಾಗಿದ್ದ ಐವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೂ ಅಕ್ರಮ ಜಾನುವಾರು ಸಾಗಾಟ ಮಾಡಿರುವ ಲಾರಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿರುವಂತೆ ಗೋಪ್ರೇಮಿಗಳು ಪೊಲೀಸ್ ಠಾಣೆ ಎದುರು ಜಮಾಯಿಸಿ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.