ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ,ಏಳು ಆರೋಪಿಗಳನ್ನ ಬಂಧಿಸಿ16 ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಬ್ಯಾಹಟ್ಟಿ ಗ್ರಾಮದ ಬಳಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಐವರನ್ನ ಬಂಧಿಸಿ, ಒಂಬತ್ತು ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದು, ಎಲ್ಲರ ಮೇಲೆ ಕಾನೂನು ಕ್ರಮ ಜರುಗಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ್ ಚಟುವಟಿಕೆ ನಡೆಯದಂತೆ ಠಾಣೆಯ ಎಲ್ಲರೂ ನಿರಂತರ ಕರ್ತವ್ಯ ನಿರ್ವಹಿಸುತ್ತಿದ್ದಾರೆ.