ಸುದ್ದಿಬಿಂದು ಬ್ಯೂರೋ
ಕುಮಟ : ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಅಳ್ವೆಕೋಡಿಯ ರಾಷ್ಟ್ರೀಯ ಹೆದ್ದಾರಿ 66ರ ಮಾವಿನ ಮರ ಕ್ರಾಸ್ ಬಳಿ ನಡೆದಿದೆ.

ಬೈಕ್ ಸವಾರ ಗಣೇಶ ಪಟಗಾರ( 26) ಕುಮಟ ತಾಲೂಕಿನ ಮಾಸೂರು ಗ್ರಾಮದ ನಿವಾಸಿ ಎಂದು ಗೊತ್ತಾಗಿದೆ. ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಅತೀ ವೇಗ ಹಾಗೂ ಅಜಾಗರುಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್ ಸವಾರ ನ ಕಾಲಿಗೆ ಗಾಯವಾಗಿದ್ದು ಕುಮಟ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಕುಮಟ ಪಿಎಸ್ಐ ನವೀನ್ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.