ಸುದ್ದಿಬಿಂದು ಬ್ಯೂರೋ
ಕಾರವಾರ : ನಮ್ಮ ಸನಾತನ ಧರ್ಮವನ್ನು ಅವಹೇಳನ ಮಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.
ನಮ್ಮ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎನ್ನುವ ಮೂಲಕ ಉದಯನಿಧಿ ಸ್ಟಾಲಿನ್ ನಮ್ಮ ಭಾವನೆಗಳ ಮೇಲೆ ಚೆಲ್ಲಾಟ ಆಡುತ್ತಿದ್ದಾರೆ. ದೇಶಸೇವೆ ಮಾಡುವ ಸಂಘಟನೆಯ ವಿರುದ್ಧವೂ ಅವಹೇಳನಕರ ರೀತಿಯಲ್ಲಿ ಬರೆದಿದ್ದಾರೆ. ಸ್ಟಾಲಿನ್ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಹುಟ್ಟಿಸಲು ಅವರು ಪ್ರೇರೇಪಿಸುತ್ತಿದ್ದಾರೆ.
ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಮೂಲಕ ಇನ್ನುಮುಂದೆ ಇಂತಹ ದುಸ್ಸಾಹಸಕ್ಕೆ ಯಾರೂ ಇಳಿಯದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.