ಸುದ್ದಿಬಿಂದು ಬ್ಯೂರೋ
ಅಂಕೋಲಾ : ರೊಯ್ ಫ್ಯಾಶನ್ ಗೆ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ವಾಗಿ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿರುವ ಘಟನೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ನಡೆದಿದೆ.


ಅಂಕೋಲಾ ಪಟ್ಟಣದಲ್ಲಿರುವ ರೊಯ್ ಫ್ಯಾಶನ್ ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದು, ಇದರಿಂದ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಷ್ಟೆ ಅಲ್ಲದೆ ಅಕ್ಕಪಕ್ಕದಲ್ಲಿರುವ ಅಂಗಡಿ ಹಾಗೂ ಮನೆಗಳಿಗೂ ಸಹ ಬೆಂಕಿ ತಗುಲಿದೆ.
ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಅಂಕೋಲಾ ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಸಾರ್ವಜನಿಕರು ಕಳೆದ ಅರ್ಧ ಗಂಟೆಯಿಂದ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ..
ಘಟನೆಯಿಂದ ಸುಮಾರು ಹದಿನೈದು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ನಲಾಗಿದೆ. ಚೌತಿ ಹಬ್ಬ ಹತ್ತಿರ ಇರುವುದರಿಂದ ದೊಡ್ಡ ಪ್ರಮಾಣದಲ್ಲಿ ಅಂಗಡಿ ಮಾಲೀಕರು ಬಟ್ಟೆ ಖರೀದಿ ಮಾಡಿದ್ದರು ಎನ್ನಲಾಗಿದ್ದು, ಅವೆಲ್ಲವೂ ಈಗ ಬೆಂಕಿಗೆ ಸುಟ್ಟು ಹೋಗಿದ್ದು ನಷ್ಡ ಉಂಟಾಗಿದೆ.