ಸುದ್ದಿಬಿಂದು ಬ್ಯೂರೋ
ಕಾರವಾರ : ಮಹಿಳಾ ಮೀಸಲಾತಿ ವಿಧೇಯಕಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಸಮ್ಮತಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಮಸೂದೆಯನ್ನು ವಿಶೇಷ ಅಧಿವೇಶನದಲ್ಲಿ ಮಂಡಿಸಿರುವುದು ಅತ್ಯಂತ ಸ್ವಾಗತಾರ್ಹ ಹಾಗೂ ಐತಿಹಾಸಿಕ ಸಂಗತಿ. ಜೊತೆಗೆ ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದ್ದಾರೆ
.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮಹಿಳಾ ಮೀಸಲಾತಿ ವಿಧೇಯಕ ಚರಿತ್ರಾರ್ಹವಾಗಿದೆ. ಈ ವಿಧೇಯಕ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವುದು ಒಬ್ಬ ಮಹಿಳೆಯಾಗಿ ಅತ್ಯಂತ ಖುಷಿಯಾಗಿದೆ. ನಮ್ಮ ಕ್ಷೇತ್ರದ, ನಾಡಿನ ಸಮಸ್ತ ಮಹಿಳೆಯರ ಪರವಾಗಿ ನಾನು ಇದನ್ನು ಸ್ವಾಗತಿಸುತ್ತೇನೆ.

ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಇರುವ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಇದುವರೆಗೂ ಅಗತ್ಯ ಪ್ರಮಾಣದಲ್ಲಿ ಸ್ಥಾನಗಳು ದೊರಕಿರಲಿಲ್ಲ. ಈಗ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಇಂತಹ ಕ್ರಾಂತಿಕಾರಿ ನಿರ್ಣಯಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ವಿಧೇಯಕ ಸದ್ಯದಲ್ಲೇ ಕಾಯಿದೆ ರೂಪದಲ್ಲಿ ಜಾರಿಯಾಗುವುದು ನಿಶ್ಚಿತವಾಗಿದೆ. ಈ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಎಲ್ಲರನ್ನೂ ಅಭಿನಂದಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.