ಸುದ್ದಿಬಿಂದು ಬ್ಯೂರೋ
ಶಿರಸಿ : ಮನೆಯ ಹಿಂಬಾಗದಲ್ಲಿ ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.

ನರೂರು ಗ್ರಾಮದ ಸದಾನಂದ ಬಸಪ್ಪ‌ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ‌ ಶ್ರೀಗಂಧದ (Sandalwood)ತುಂಡುಗಳನ್ನು ದಾಸ್ತಾನು ಇಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಸುಮಾರು 2ಲಕ್ಷ 25 ಸಾವಿರ.(2 lakh 25 thousand) ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.