ಸುದ್ದಿಬಿಂದು ಬ್ಯೂರೋ
ಕಾರವಾರ : ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಇಂದು ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾ ಕೇಂದ್ರವಾಗಿರುವ ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಾಗರ ದರ್ಶನ ಹಾಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಚಾಲನೆ ನೀಡಿದ್ದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ್ನಾಡಿದ ಸಚಿವ ಮಂಕಾಳು ವೈದ್ಯ ಅವರು ಸಮಸ್ಯೆ ಪರಿಹಾರಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗು ಸಹ ಸರಕಾರದ ಯೋಜನೆಗಳು ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕೆಲಸ ಮಾಡಬೇಕು.ಜನರಿಗೆ ನಮ್ಮ ಸರಕಾರದಿಂದ ಕೆಲಸ ಆಗುತ್ತಿದೆ ಎನ್ನುವ ನಂಬಿಕೆ ಇದೆ.
ನಮ್ಮ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಏನಿದೆ. ಇದು ಜನರ ಸಮಸ್ಯೆ ,ಕಷ್ಟಗಳಿಗೆ ಪರಿಹಾರ ನೀಡುವುಕ್ಕಾಗಿಯೇ ಬಂದಿರೋದು, ತಮ್ಮ ಯಾವುದೇ ಸಮಸ್ಯೆಗಳು ಇದ್ದರೂ ನೇರವಾಗಿ ನಮ್ಮ ಬಳಿ ಬಂದು ತಮ್ಮಗೆ ಏನ ಕೆಲಸ ಆನೇಕಿದೆ ಅದನ್ನ ಮಾಡಿಕೊಂಡು ಹೋಗಬಹುದು. ಜನರ ಕೆಲಸ ಮಾಡುವುದು ನಮ್ಮ ಕರ್ತವ್ಯ, ನಾವು ಅದನ್ನ ಯಾವಾಗಲೂ ಮಾಡಿಕೊಡಲು ಸಿದ್ದರಿದ್ದವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಹೇಳಿದ್ದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಕಾರವಾರ ಶಾಸಕ, ಸತೀಶ ಸೈಲ್,ಜಿಲ್ಲಾಪಂಚಾಯತ ಸಿ ಇಓ ಹಾಗೂ ಜಿಲ್ಲೆಯ ಎಲ್ಲಾ ಹಿರಿಯ ಅಧಿಕಾರಿಗಳು ಹಾಜರಿದ್ದರು.