ಸುದ್ದಿಬಿಂದು ಬ್ಯೂರೋ
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡುಹಗಲೇ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಮೌಲಾಲಿ ಎಂಬಾತ ಕೊಲೆಯಾದ ದುರ್ದೈವಿಯಾಗಿದ್ದಾನೆ
.

ಈ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ ನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾದ ಮೌಲಾಲಿ ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಬಂದಿದ್ದ ಎನ್ನಲಾಗಿದೆ.

ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ.ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.

ಕೊಲೆ ಮಾಡಿ ಪರಾರಿಯಾದವರ ಶೋಧ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.