ಸುದ್ದಿಬಿಂದು ಬ್ಯೂರೋ
ಕಾರವಾರ :ಬಸ್ ಓವರ್‌ಟೇಕ್ ಮಾಡಲು ಹೋಗಿ ಬಸ್ ಕೆಳಗೆ ಬಿದ್ದ ಬೈಕ್ ಸವಾರ ನೋರ್ವಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ.

ಅಂಕೋಲಾ ತಾಲ್ಲೂಕಿನ ಶಿರಗುಂಜಿ ಗ್ರಾಮದ ನಿವಾಸಿ ಜೀತೇಂದ್ರ ಗೌಡ ಎಂಬಾತನೆ ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರನಾಗಿದ್ದಾನೆ.
ಈತ ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಬಸ್ ಓವರ್‌ಟೇಕ್ ಮಾಡಲು ಹೋಗಿದ್ದ ಎನ್ನಲಾಗಿದ್ದು ಈ ವೇಳೆ ಎದುರಾದ ಕಂಟೇನರ್ ಲಾರಿಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಬಸ್ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ‌ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರವಾರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.