ಸುದ್ದಿಬಿಂದು ಬ್ಯೂರೋ
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ಕ್ಷೇತ್ರದಲ್ಲಿ ಬಹಳಷ್ಟು ಹೆಸರುವಾಸಿಯಾದ ಮಹೇಶ್ ಬಸ್ (Mahesh Bus) ಮಾಲಕರು ತಾನು ವಾಸಿಸುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ನೂರಾರು ಬಸ್ ಗಳನ್ನು ಹೊಂದಿದೆ. ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್
ಅವರು ಕದ್ರಿ ಕಂಬಳ ಸಮೀಪ ಇರುವ ಮೊರಿಸ್ಕಾ ಅಪಾರ್ಟ್ ಮೆಂಟ್ ನಿಂದ ನೇಣು ಬಿಗಿದು ಆತ್ಮಹತ್ಯೆಗೈದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸಾವಿರಾರು ಜನರಿಗೆ ಉದ್ಯೋಗ ನೀಡಿದ ಉದ್ಯೋಗದಾತರಾಗಿರುವ ಪ್ರಕಾಶ್ ಶೇಖ ಆತ್ಮಹತ್ಯೆ ಮಾಡಿಕೊಂಡಿರುವುದು ಧಿಗ್ರಮೆ ಮೂಡಿಸಿದೆ.