ಸುದ್ದಿಬಿಂದು ಬ್ಯೂರೋ
ಕುಮಟ :ಪರ ಪುರಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಓರ್ವಳು, ತನ್ನ ಅನೈತಿಕ ಸಂಬಂಧಕ್ಕೆ ಕಟ್ಟಿಕೊಂಡ ಪತಿ ಅಡ್ಡಿಯಾಗಬಹುದು ಎಂದು ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯಿಂದಲ್ಲೆ ಪತಿಯನ್ನ ಕೊಲೆ ಮಾಡಿಸಿರುವ ಘಟನೆಯಲ್ಲಿ ನಾಲ್ವರು ಆರೋಪಿಗಳನ್ನ ಉತ್ತರಕನ್ನಡ ಜಿಲ್ಲೆಯ ಕುಮಟ ಪೊಲೀಸರು ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ.

ಗದಗ ಮೂಲದ ಆರೋಪಿಗಳಾಗಿರುವ ಪರಶುರಾಮ, ಬಾಗಲಕೋಟೆ ಮೂಲದ ರವಿ, ಕೊಲೆಯಾದ ವ್ಯಕ್ತಿಯ ಪತ್ನಿ ರಾಜಮಾ, ಗದಗ ಮೂಲದ ಬಸವರಾಜ್ ಬಂಧಿತರಾದವರಾಗಿದ್ದಾರೆ.

ಸೆ.30 ರಂದು ಬಾಗಲಕೋಟೆ ಮೂಲದ ಬಶೀರ್ ಸಾಬ್ ಎಂಬಾತನನ್ನು ಮಂಗಳೂರು ಬೀಚ್ ನೋಡುವ ಹೆಸರಿನಲ್ಲಿ ಪತ್ನಿ ರಾಜಮಾ ಪರಶುರಾವ ಎಂಬಾತನಿಗೆ 10 ಸಾವಿರ ಹಣ ನೀಡಿ ತಾನು ಅಕ್ರಮ ಸಂಬಂಧ ಹೊಂದಿದ್ದ ಪರಶುರಾಮನೊಂದಿಗೆ ಕಳುಹಿಸಿ ಕೊಟ್ಟಿದ್ದಾಳೆ.

ಮಂಗಳೂರಿಗೆ ತೆರಳಿದ್ದ ಇವರು ಅಲ್ಲಿ ಕೊಲೆ ಮಾಡುವ ಉದ್ದೇಶದಿಂದ ಪರಶುರಾಮ ತನ್ನ ದೊಡ್ಡಮ್ಮನ ಮಗ ರವಿ, ಬಸವರಾಜ್ ಜೊತೆಯಾಗಿದ್ದಾರೆ. ನಂತರ ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ದೇವಿಮನೆ ಘಟ್ಟದಲ್ಲಿ ಕೊಲೆಯಾದ ಬಶೀರ್ ಸಾಬ್ ನೊಂದಿಗೆ ಇವರು ಇಳಿದು ದೇವಸ್ಥಾನದ ಹಿಂಭಾಗದಲ್ಲಿ ಮದ್ಯ ಸೇವಿಸಿದ್ದಾರೆ.

ಈ ವೇಳೆ ಪರಶುರಾಮ ಬಶೀರ್ ಸಾಬ್ ಗೆ ಹಿಂಭಾಗದಿಂದ ಕಟ್ಟಿಗೆಯಲ್ಲಿ ಹೊಡೆದು ಸಾಯಿಸಿ ಅಲ್ಲಿಯೇ ಕಾಡಿನಲ್ಲಿ ಶವ ಹಣಿದು ಹೋಗಿದ್ದಾರೆ.ಘಟನೆ ಬೆಳಕಿಗೆ ಬರುತಿದ್ದಂತೆ ಕುಮಟಾ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ಬಂಧಿಸಿದ್ದು ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಾನೆ ಎಂಬ ಕಾರಣದಿಂದ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದಾಗಿ ಕೊಲೆಯಾದ ಬಶೀರ್ ಸಾಬ್ ಪತ್ನಿ ರಾಜಮ ತಪ್ಪೊಪ್ಪಿಕೊಂಡಿದ್ದು ,ಆರೋಪಿಗಳನ್ನು ನ್ಯಾಯಾಲಯದ ಸುಪರ್ದಿಗೆ ವಹಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಕುಮಟಾ ಪಿ.ಎಸ್.ಐ ನವೀನ್ ನಾಯ್ಕ , ಕುಮಟಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ, ಪಿ.ಎಸ್.ಐ ಸಂಪತ್ ,ಸಿಬ್ಬಂದಿಗಳಾದ ಗಣೇಶ್ ನಾಯ್ಕ,ಗುರು ನಾಯ್ಕ ,ಪ್ರದೀಪ್ ನಾಯ್ಕ, ಲೋಕೇಶ್, ರಾಜು ನಾಯ್ಕ, ನಿರಂಜನ್ ಸೇರಿದಂತೆ ಇತರರು ಭಾಗಿಯಾಗಿದ್ದರು