ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10 ನೇ ಆವೃತ್ತಿ (Bigg Boss Season 10 Kannada ) ಆರಂಭಗೊಂಡಿದೆ. ಕಲರ್ಸ್ ಕನ್ನಡ ವಾಹಿನಿ (Colours Kannada) ಜೊತೆಗೆ ಜಿಯೋ ಸಿನಿಮಾ ಒಟಿಟಿಯಲ್ಲಿ (Jio Cinema OTT) ರಿಯಾಲಿಟಿ ಶೋ ಪ್ರಸಾರವಾಗುತ್ತಿದೆ. ಇದೀಗ ಬಿಗ್‌ಬಾಸ್‌ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Chikkaballapur Congress MLA Pradeep Eshwar ) ಸಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ.
ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ(Congress MLA,)ಪ್ರದೀಪ್ ಈಶ್ವರ್ ಈಗಾಗಲೇ ಬಿಗ್‌ಬಾಸ್ ಮನೆ ಸೇರಿಕೊಂಡಿದ್ದಾರೆ. ಪ್ರದೀಪ್ ಈಶ್ವರ್ ಅವರನ್ನು ನೋಡುತ್ತಿದ್ದಂತೆಯೇ ಬಿಗ್ ಬಾಸ್ ಸ್ಪರ್ಧಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಾಸಕರ ಜೊತೆಗೆ ಸ್ಪರ್ಧೆ ಮಾಡಬೇಕು ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ.
ಪ್ರದೀಪ್ ಈಶ್ವರ್ ಸದ್ಯ ಅತಿಥಿಯಾಗಿ ಬಿಗ್‌ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ ಎನ್ನುತ್ತಿವೆ. ಆದರೆ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಸೀಸನ್ ೧೦ರಲ್ಲಿ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಪ್ರದೀಪ್ ಈಶ್ವರ್ ಎಷ್ಟು ದಿನಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ ಅನ್ನೋವ ಕುತೂಹಲ ಉಂಟಾಗಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಶಾಸಕ ಡಾ.ಸುಧಾಕರ್ ಅವರಿಗೆ ಸೋಲಿನ ರುಚಿ ತೋರಿಸಿದ್ದ ಪ್ರದೀಪ್ ಈಶ್ವರ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಶಾಸಕರಾದ ನಂತರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿದ್ದು. ಶಾಸಕರಾಗಿ ಮಾತ್ರವಲ್ಲದೇ ಪರಿಶ್ರಮ ನೀಟ್ ಅಕಾಡೆಮಿಯ ಮೂಲಕ ಸಾಕಷ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ.