ಸುದ್ದಿಬಿಂದು ಬ್ಯೂರೋ
ಯಲ್ಲಾಪುರ : ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಶಾನಭಾಗ ಹೊಟೆಲ್ ಎದುರುಗಡೆ ಕಾರು ಒಂದಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರೂ ಮೃತಪಟ್ಟರುವ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಶಾನಭಾಗ್ ಹೋಟೆಲ್ ಎದುರುಗಡೆ ಇನೋವಾ ಕಾರಿಗೆ ಬೈಕ್ ಡಿಕ್ಕಿ ಹೊಡೆದೊದಿದ್ದು, ಬೈಕ್ ನಲ್ಲಿದ್ದ ಮೂವರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಇಬ್ಬರೂ ಮೃತಪಟ್ಟಿದ್ದಾರೆ. ಅಪಘಾತದ ವಿಡಿಯೋ ಶಾನಭಾಗ ಹೊಟೇಲ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸುದ್ದಿ ಬಿಂದು ವೆಬ್ ಸೈಟ್ ಗೆ ಲಭ್ಯವಾಗಿದೆ.