ಸುದ್ದಿಬಿಂದು ಬ್ಯೂರೋ
ಭಟ್ಕಳ: ಕರಾವಳಿ ಹೆದ್ದಾರಿಯಲ್ಲಿ (Coastal Highway ) ಕಾರು ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ (Car-lorry accident) ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ‌ ಮಹಿಳೆ ಮೃತಪಟ್ಟರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ನಗರದ ಬೈಪಾಸ್ ಬ್ರಿಡ್ಜ್ ಸಮೀಪ ನಡೆದಿದೆ.

ರೀಟಾ ಡಿಸೋಜಾ (38) ಮೃತ ಮಹಿಳೆಯಾಗಿದ್ದಾಳೆ. ಜೇವಿಯರ್ ರಾಜ್ ಡಿಸೋಜಾ ಮತ್ತು ಪುತ್ರಿ ಇನ್ರಿಕಾ ಎಂಬುವವರು ಗಾಯಗೊಂಡಿದ್ದಾರೆ. ಇವರು ಕಾರಿನಲ್ಲಿ ಪತಿ ಹಾಗೂ ಮಗಳೊಂದಿಗೆ ಉಡುಪಿ ಗೋವಾ ಕಡೆಗೆ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಸಾಗಿಸಿವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ. ಹಾಗೂ ಮೃತ ಮಹಿಳೆಯ ಪತಿ ಹಾಗೂ ಪುತ್ರಿ ಸಣ್ಣ ಪುಟ್ಟಗಾಯಾಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.