ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಹೃದಯದ ಬೈಪಾಸ್ ಸರ್ಜರಿ ಮಾಡಲಾಗಿದೆ. ಬಾನುವಾರ ತೀವ್ರ ಸುಸ್ತಾಗಿದ್ದ ಬೊಮ್ಮಾಯಿಯವರು ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ತಪಾಸಣೆ ಮಾಡಿಕೊಂಡಿದ್ದರು.

ಬೊಮ್ಮಾಯಿಯವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಕೊಡಲೇ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದಾಗ ಅವರನ್ನು ಬನ್ನೇರುಘಟ್ಟದ ಪೋರ್ಟಿಸ್ ಆಸ್ಪತ್ರೆಗೆ ಧಾಖಲಿಸಲಾಗಿತ್ತು. ಸೋಮವಾರ ಬೆಳಗಿನ ಆರು ಘಂಟೆಗೆ ಶಸ್ತ್ರ ಚಿಕಿತ್ಸೆ ನಡೆಸಿದ ಖ್ಯಾತ ವೈಧ್ಯ ಡಾ. ವಿವೇಕ ಜವಳಿ, ನಾಲ್ಕು ತಾಸಿಗೂ ಹೆಚ್ಚು ಕಾಲ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.

ಸಧ್ಯ ಬೊಮ್ಮಾಯಿಯವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂಧಿಸುತ್ತಿದ್ದಾರೆ ಎಂದು ಅವರ ಅಪ್ತ ಮೂಲಗಳು ತಿಳಿಸಿವೆ.

.