ಸುದ್ದಿಬಿಂದು ಬ್ಯೂರೋ
ಕುಮಟ :ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಅಳ್ವೆಕೋಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು(Car) ಮತ್ತು ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗೊಂಡ ಘಟನೆ ನಡೆದಿದೆ.

ಹೈದರಾಬಾದ್(Hyderabad) ಮತ್ತು ಆಂದ್ರ ಮೂಲದ 10 ಮಂದಿ ಗಾಯಗೊಂಡವರಾಗಿದ್ದಾರೆ.ಇವರೆಲ್ಲರು ಶಬರಿಮಲೆ ಯಾತ್ರೆಗೆ (Sabarimala Yatra) ತೆರಳುತ್ತಿದ್ದರು ಎನ್ನಲಾಗಿದೆ.

ಕುಮಟಾ ಕಡೆಯಿಂದ ಹೊನ್ನಾವರ ಕಡೆ ಸಾಗುತ್ತಿದ್ದ ಖಾಸಗಿ ಬಸ್ ಹೊನ್ನಾವರ ಕಡೆಯಿಂದ ಕುಮಟಾ ಕಡೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತವಾಗಿದೆ. ಗಾಯಗೊಂಡ ಎಲ್ಲರನ್ನ ತಕ್ಷಣ ಕುಮಟ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಂಬುಲೆನ್ಸ್ ಮೂಲಕ ಕುಮಟ ಸರಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದಿಂದ ಕೆಲ ಸಮಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕುಮಟಾ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಇನ್ನೂ ಅಪಘಾತವಾಗಿರುಗ ಬಗ್ಗೆ ಕುಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.