ಸುದ್ದಿಬಿಂದು ಬ್ಯೂರೋ
ಭಟ್ಕಳ: ಪತ್ನಿಯನ್ನೆ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ( Murder)ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ(Murudeshwar) ತೇರ್ನಾಮಕ್ಕಿ ಸಬ್ಬತ್ತಿ ಕ್ರಾಸ್ ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.

ನಂದಿನಿ ಲೋಕೇಶ ನಾಯ್ಕ (30) ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ ಕೊಲೆಗೆ ಕಾರಣ ಎನ್ನಲಾಗಿದೆ. ಮೃತಳಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದರು. ಪತಿಯು ಶಿಲ್ಪಿ ಕೆಲಸ ಮಾಡಿಕೊಂಡಿದ್ದನು. ಈತ ಮುರ್ಡೇಶ್ವರದ ನಾಡವರ ಕೇರಿ ನಿವಾಸಿಯಾಗಿದ್ದು ಕಳೆದ 3ದಿನದ ಹಿಂದಷ್ಟೇ ಸಬ್ಬತ್ತಿ ಕ್ರಾಸನಲ್ಲಿರುವ ಮನೆಯೊಂದರಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ

ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದು ಗಾಯಗೊಂಡ ಮಹಿಳೆ ರಕ್ತದ ಮಡುವಿನಲ್ಲಿ ಮನೆಯ ಹೊರಗೆಬಂದು ಬಿದ್ದಿದ್ದಾಳೆ. ಇದನ್ನು ಪಕ್ಕದ ಮನೆಯವರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಸಿಪಿಐ ವಸಂತ ಕಾಯ್ಕಿಣಿ ಮತ್ತು ಅವರ ತಂಡ
ಆರೋಪಿಗಾಗಿ ಬಲೆ ಬೀಸಿದ ಪೊಲೀಸರು ಲೋಕೇಶ ನಾಯ್ಕನನ್ನು ಖಾಸಗಿ ಹೊಟೇಲವೊಂದ ರಲ್ಲಿ ವಶಕ್ಕೆ ಪಡೆದಿದ್ದಾರೆ. ಪಿಎಸ್ ಐ ಮಂಜುನಾಥ, ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ‌ಕಾರ್ಯಚರಣೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ತಾಯಿ ಕಳೆದುಕೊಂಡ ಮಕ್ಕಳ, ಹಾಗೂ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ