ಸುದ್ದಿಬಿಂದು ಬ್ಯೂರೋ
ಭಟ್ಕಳ‌: ಕಳೆದ‌ ಒಂದುವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಪ್ರಜ್ವಲ್ ಗೋವಿಂದ ಖಾರ್ವಿ(25) ಡೆಂಗ್ಯೂ ನಿಂದಾಗಿ ಮೃತಪಟ್ಟ ಯುವಕನಾಗಿದ್ದಾನೆ.ಈತ ಭಟ್ಕಳದ ತಲಗೋಡ್ ನಿವಾಸಿಯಾಗಿದ್ದು, ಮೀನುಗಾರಿಕೆ ಕಾರ್ಮಿಕನಾಗಿ ಉದ್ಯೋಗ ಮಾಡುತ್ತಿದ್ದ, ಕಳೆದ ಮೂರು ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪ್ರಜ್ವಲ್ ಗೆ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಈ ವೇಳೆ ರಕ್ತ ತಪಾಸಣೆಯಲ್ಲಿ ಡೆಂಘಿ ಸೋಂಕಿರುವುದು ಪತ್ತೆಯಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಮೃತಪಟ್ಟಿದ್ದಾನೆ.