ಸುದ್ದಿಬಿಂದು ನ್ಯೂಸ್ ಡೆಸ್ಕ್
ಏಕದಿನ ವಿಶ್ವಕಪ್​ ಟೂರ್ನಿಯ ಮಹತ್ವದ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ ಭಾರತ ಟಾಸ್​ ಗೆದ್ದು ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದು, ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ.

ವಿರಾಟ್ ಕೊಹ್ಲಿ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದು, 95 ರನ್ ಹೊಡೆಯುವ ಮೂಲಕ ಕ್ಯಾಚ್‌ ನೀಡಿ ಔಟಾಗುವ ಮೂಲಕ ಶತಕ ಕೈತಪ್ಪಿಸಿಕೊಂಡಿದ್ದರು ಸಹ ಭಾರತ ತಂಡವನ್ನ ಗೆಲುವಿನ ದಡಕ್ಕೆ ಸೇರಿಸಿದ್ದಾರೆ.