ಸುದ್ದಿಬಿಂದು ಬ್ಯೂರೋ
ಅಂಕೋಲಾ : ಮನೆ ಹತ್ತಿರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಓರ್ವಳಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆತ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

ಸೀತಾ ಸುಕ್ರು ಅಂಬಿಗ (54) ಎಂಬಾಕೆಯೆ ಮೃತಪಟ್ಟಿರುವ ಮಹಿಳೆಯಾಗಿದ್ದಾಳೆ. ಹಾವು ಕಡಿದ ತಕ್ಷಣ ಆಕೆಯನ್ನು ಯಲ್ಲಾಪುರ‌ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,‌ಆದರೆ ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.