ಸುದ್ದಿಬಿಂದು ಬ್ಯೂರೋ
ಕಾರವಾರ : ಪೋಲಿಸ್ ಕಿರುಕುಳಕ್ಕೆ ಕಾರವಾರದಲ್ಲಿ ಮಾರುತಿ ನಾಯ್ಕ ಎಂಬಾತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಆರೋಪ ಬಂಧಿರುವ ಪೊಲೀಸ್ ಸಿಬ್ಬಂದಿಗಳನ್ನ ಸಸ್ಪೆಂಡ್ ಮಾಡಿದ್ದಾರೆ.

CPI ಕುಸುಮಾಧರ ಕೆ, PSI ಶಾಂತಿನಾಥ,(cpi psi suspended) ಕಾನಸ್ಟೆಬಲ್ ದೇವರಾಜ್ ಸಸ್ಪೆಂಡ್ ಆಗಿದ್ದಾರೆ. ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸುಸೈಡ್ ನೋಟ್ ಬರೆದು ವಿಡಿಯೋ ರೆಕಾರ್ಡ್ (video record,)ಮಾಡಿದ್ದು, ತನ್ನ ಆತ್ಮಹತ್ಯೆಗೆ. ಪೊಲೀಸರು, ಎಲಿಷಾ ಎಲಕಪಾಟಿ,ಬಸವರಾಜ, ಸುರೇಶ್ ಮತ್ತಿತರರ ಹೆಸರು ಸುಸೈಡ್ ನೋಟ್‌ನಲ್ಲಿ ಬರೆದಿಟ್ಟಿದ್ದ,

ಪ್ರಕರಣದ ಗಂಭೀರತೆ ಹಿನ್ನೆಲೆ ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್ ಮಾಡಲಾಗಿದ್ದು, ಆರೋಪಿಗಳನ್ನ ಬಂಧಿಸಲಾಗಿಧ. ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನ ಮಾರುತಿ ನಾಯ್ಕ್ ರೆಕಾರ್ಡ್ ಮಾಡಿದ್ದ. ಬಳಿಕ ಎಲಿಷ ಎಲಕಪಾಟಿ ಕುಟುಂಬಸ್ಥರು ಮಾರುತಿ ನಾಯ್ಕ್ ಮೇಲೆ ಹಲ್ಲೆ ನಡೆಸಿದ್ದರು.ಎಲಿಷಾ ಕುಟುಂಬಕ್ಕೆ ಪೊಲೀಸರು ಬೆಂಬಲವಾಗಿ ನಿಲ್ಲುವ ಮೂಲಕ ತನಗೆ ಕಿರುಕುಳ ನೀಡುತ್ತಿರುವುದಾಗಿ ಮೃತ ಮಾರುತಿ ನಾಯ್ಕ ಆರೋಪಿಸಿದ್ದರು.

ಈ ಎರಡು ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.ಪ್ರಕರಣದಲ್ಲಿ ಯಾವುದೇ ನ್ಯಾಯ ಸಿಕ್ಕಿರಲಿಲ್ಲ ಹಾಗೂ ಈ ಪ್ರಕರಣದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 20ರಂದು ಮಾರುತಿ ನಾಯ್ಕ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು,

ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಪೂರ್ವದಲ್ಲಿ ಡೆತ್ ನೋಟ್ ಹಾಗೂ ವಿಡಿಯೋ ರೇಕಾರ್ಡ್ ಮಾಡಿಟ್ಟದ್ದು ಇದನ್ನ ಪರಿಶೀಲನೆ ಮಾಡಿ ಪೊಲೀಸ ಸಿಬ್ಬಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಜಿಲ್ಲಾಪೊಲೀಸ್ ವರಿ ಎಸ್ಪಿ ವಿಷ್ಣುವರ್ಧನ್ ಅವರು ಸ್ಪಷ್ಟನೆ ನೀಡಿದ್ದಾರೆ.