ಸುದ್ದಿಬಿಂದು ಬ್ಯೂರೋ
ಕಾರವಾರ : ರಾಜ್ಯದ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯದವರ‌ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹಳಿಯಾಳ ಶಾಸಕ ಹಾಗೂ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಆರ್ ದೇಶಪಾಂಡೆ (RV Deshpande) ಯಾಕ್ರಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಬೇಕು.ರಾಜ್ಯದಲ್ಲಿ ನಮ್ಮದೆ ಸರಕಾರ ಇದೆ. (Congress Government) ಈ ವಿಚಾರ ನಿಜವಾಗಲೂ ನಾ ಕೇಳಿಲ್ಲ. ನಿಮ್ಮಿಂದಲ್ಲೆ ಗೊತ್ತಾಯತ್ತು. ಎನ್ನುವ ಮೂಲಕ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ ಆಗುವ ವಿಚಾರವನ್ನ ತಳ್ಳಿಹಾಕಿದ್ದಾರೆ.

ಅವರು ಇಂದು ಕಾರವಾರಕ್ಕೆ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದರು. ಯಾವುದೇ ಊಹಾಪೋಹಗಳಿಗೆ ತಲೆ ಕೆಡಿಸಿಕೊಳ್ಳಬಾರು, ರಾಜಕೀಯದಲ್ಲಿ(Politics)ಇಂತಹ ಊಹಾಪೋಹಗಳು ಇರುವುದು ಸಹಜ.ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಮ್ಮ ಸರಕಾರ ಸುಭದ್ರವಾಗಿದೆ. ಯಾವುದೇ ಸಮಸ್ಯೆಗಳು ಇಲ್ಲ. ರಾಜಕೀಯದಲ್ಲಿ, ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ, ಅದರ ಅರ್ಥ ಮುಖ್ಯಮಂತ್ರಿ ಬದಲಾವಣೆ ಮಾಡತ್ತಾರೆ ಅಂತ ಅಲ್ಲ. ಈಗಾಗಲೇ ಗ್ಯಾರಂಟಿ ಯೋಜನೆಗಳನ್ನ ರಾಜ್ಯ ಜನಕ್ಕೆ ನಾವು ಕೊಟ್ಟಿದ್ದೇವೆ.

ಬಿಜೆಪಿ ಸರಕಾರದ (bjp Government)ಆಡಳಿತದ ನಂತರದಲ್ಲಿ ಹಣಕಾಸಿನ ಪರಿಸ್ಥಿತಿ ಸರಿಯಾಗಿಲ್ಲ. ಪ್ರತಿಯೊಂದು ಕ್ಷೇತ್ರಕ್ಕೂ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡುವ ಬಗ್ಗೆ ಮುಖಂತ್ರಿಗಳು ಚಿಂತನೆ ಮಾಡಿದ್ದಾರೆ. ಅದು ಶೀಘ್ರವಾಗಿ ಆಗಲಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇನ್ನೂ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ಸ್ಥಳಗಳಿದ್ದು ಅದನ್ನ ಕೂಡ ಅಭಿವೃದ್ಧಿ ಮಾಡುವ ಬಗ್ಗೆ ಚಿಂತನೆ ಇದೆ. ಪ್ರತಿನಿತ್ಯ ಸಾಕಷ್ಟು ಪ್ರವಾಸಿಗರು ನಮ್ಮ ಜಿಲ್ಲೆಗೆ ಬರುತ್ತಾರೆ. ಬರುವ ಪ್ರವಾಸಿಗರಿಗೆ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಹೇಳಿದ್ದರು.